Civil Constable

Civil Constable

 

ಕರ್ನಾಟಕ ಪೊಲೀಸ್‌ ಇಲಾಖೆಯಲ್ಲಿ ಆಗಾಗ ಅಗತ್ಯ ಸಿವಿಲ್‌ ಪೊಲೀಸ್‌ ಕಾನ್ಸ್‌ಟೇಬಲ್‌, ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌, ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳನ್ನು ನೇರ ನೇಮಕಾತಿ ವಿಧಾನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಇಂದಿನ ಲೇಖನದಲ್ಲಿ ಸಿವಿಲ್‌ ಪಿಸಿ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಯ ಕಂಪ್ಲೀಟ್‌ ಡೀಟೇಲ್ಸ್‌ ಇಲ್ಲಿದೆ.

ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗೆ ಆಯ್ಕೆ ಪ್ರಕ್ರಿಯೆಗಳೇನು?

ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗೆ ಆಯ್ಕೆ ಪ್ರಕ್ರಿಯೆಗಳೇನು?

- ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಮೊದಲು 100 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಇದು ಬಹುವಿಧ ಉತ್ತರ ಆಯ್ಕೆಗಳ ಪರೀಕ್ಷೆ ಆಗಿರುತ್ತದೆ.

- ಲಿಖಿತ ಪರೀಕ್ಷೆಯಲ್ಲಿ 1:5 ರ ಅನುಪಾತದಡಿ ಒಟ್ಟು ಹುದ್ದೆಗೆ ಅರ್ಹಗೊಂಡ ಅಭ್ಯರ್ಥಿಗಳಿಗೆ ದೇಹದಾರ್ಢ್ಯತೆ ಪರೀಕ್ಷೆ ಮತ್ತು ಸಹಿಷ್ಣುತೆ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ಲಿಖಿತ ಪರೀಕ್ಷೆ ಮಾದರಿ :-

100 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ವಸ್ತುನಿಷ್ಠ ಮಾದರಿಯ ಬಹುವಿಧ ಆಯ್ಕೆ ಉತ್ತರಗಳ ಪರೀಕ್ಷೆ ಇದಾಗಿರುತ್ತದೆ. ಪ್ರತಿ ಸರಿ ಉತ್ತರಕ್ಕೆ 1.00 ಅಂಕಗವನ್ನು ನೀಡಲಾಗುತ್ತದೆ. ತಪ್ಪು ಉತ್ತರಕ್ಕೆ 0.25 ಅಂಕ ಕಳೆಯಲಾಗುತ್ತದೆ.

ಸೂಚನೆ : ವೃಂದ ಮತ್ತು ನೇಮಕಾತಿ (ತಿದ್ದುಪಡಿ) ನಿಯಮಗಳು, 2020 ರನ್ವಯ ಸದರಿ ಲಿಖಿತ ಪರೀಕ್ಷೆಯಲ್ಲಿ ಶೇಕಡ.30 ಅಂಕಗಳಿಗಿಂತ ಕಡಿಮೆ ಅಂಕಗಳನ್ನು ಗಳಿಸಿರುವ ಅಭ್ಯರ್ಥಿಗಳನ್ನು ಅರ್ಹತಾ ಪಟ್ಟಿಯಲ್ಲಿ ಸೇರಿಸಲಾಗುವುದಿಲ್ಲ ಹಾಗೂ ಅರ್ಹತೆಗೆ ಪರಿಗಣಿಸಲಾಗುವುದಿಲ್ಲ. ಈ ಪರೀಕ್ಷೆ ಬರೆದವರನ್ನು ಮೆರಿಟ್ ಮತ್ತು ಮೀಸಲಾತಿ ಆಧಾರದಲ್ಲಿ ಹುದ್ದೆ ಸಂಖ್ಯೆಗೆ ಅನುಗುಣವಾಗಿ 1:5 ಅಭ್ಯರ್ಥಿಗಳನ್ನು ದೇಹದಾರ್ಢ್ಯತೆ ಪರೀಕ್ಷೆಗೆ ಕರೆಯಲಾಗುತ್ತದೆ.

ಆಯ್ಕೆಯ ಪ್ರಕ್ರಿಯೆ :-

ಲಿಖಿತ ಪರೀಕ್ಷೆ 100 ಅಂಕಗಳಿಗೆ  ಜಿ ಕೆ ಪ್ರಶ್ನೆ ಪತ್ರಿಕೆ ನಂತರ ಕಟ್ ಆಫ್ ಮಾರ್ಕ್ಸ್ ಆಧಾರದ ಮೇಲೆ ಸಲೆಕ್ಟ್ ಆಧ ಅಭ್ಯರ್ಥಿಯನ್ನು ದಹಿಕ ಪರೀಕ್ಷೆಗೆ ಕರೆಯಲಾಗುತ್ತದೆ.

- ದೇಹದಾರ್ಢ್ಯತೆ ಪರೀಕ್ಷೆ ನಡೆಸಿ, ಇದರಲ್ಲಿ ಅರ್ಹರಾದವರಿಗೆ ಸಹಿಷ್ಣುತೆ ಪರೀಕ್ಷೆ ನಡೆಸಲಾಗುತ್ತದೆ.

- ನಂತರ ತಾತ್ಕಾಲಿಕ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಲಾಗುತ್ತದೆ.

ಶೈಕ್ಷಣಿಕ ವಿದ್ಯಾರ್ಹತೆ: ದ್ವಿತೀಯ ಪಿಯುಸಿ (12th Pass) ಅಥವಾ ತತ್ಸಮಾನ ವಿದ್ಯಾರ್ಹತೆ.

ವಯೋಮಿತಿ: ಕನಿಷ್ಠ 19 ವರ್ಷ. ಸಾಮಾನ್ಯ ಅಭ್ಯರ್ಥಿಗಳಿಗೆ 25 ವರ್ಷ, ಎಸ್‌ಸಿ/ಎಸ್‌ಟಿ/ಹಿಂದುಳಿದ ವರ್ಗಗಳಿಗೆ 27 ವರ್ಷ ಮತ್ತು ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷ ಗರಿಷ್ಠ ವಯೋಮಿತಿ ಇರುತ್ತದೆ.

ಕಾರ್ಯ ಕರ್ತವ್ಯಗಳು :-

ಪೊಲೀಸ್ ಸ್ಟೇಷನ್ ಕಂಪ್ಲೇಂಟ್ ರಿಜಿಸ್ಟರ್ ಮಾಡಿಕೊಳ್ಳುದು ಮತ್ತು ವರದಿ ಸಲ್ಲಿಸುವುದು ಹಾಗೂ  ಶಾಸಸ್ತ್ರ ಪೇದೆಗಳಿಗಿಂತ ಕ್ರಿಯಾಯೋಜನೆ ಹೊಂದಿರುತ್ತಾರೆ.

ದೈಹಿಕ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ: ಲಿಖಿತ ಪರೀಕ್ಷೆಯಲ್ಲಿ 1:5 ಅನುಪಾತದಲ್ಲಿ ಆಯ್ಕೆಯಾದವರಿಗೆ.

ವೈದ್ಯಕೀಯ ಪರೀಕ್ಷೆ (Medical Exam): ಅಂತಿಮ ಹಂತ.

ದೈಹಿಕ ಅರ್ಹತೆ (PST): ಪುರುಷ ಅಭ್ಯರ್ಥಿಗಳಿಗೆ ಕನಿಷ್ಠ 168 ಸೆಂ.ಮೀ ಎತ್ತರ, 86 ಸೆಂ.ಮೀ ಎದೆ ಸುತ್ತಳತೆ (ಉಸಿರು ಹೊರಹಾಕಿದಾಗ) ಇರಬೇಕು. ಮಹಿಳಾ ಅಭ್ಯರ್ಥಿಗಳಿಗೆ 157 ಸೆಂ.ಮೀ ಎತ್ತರ ಇರಬೇಕು (ವರ್ಗಾವಾರು ವಿನಾಯಿತಿ ಅನ್ವಯ).

ವೇತನ ಶ್ರೇಣಿ: ಸುಮಾರು ₹23,500 - ₹47,650.

ಕೆಲಸದ ಸ್ಥಳ: ಪೊಲೀಸ್ ಠಾಣೆಗಳು (ನಾಗರಿಕ ವಲಯ). 

Comments

Popular posts from this blog

SSC

FDA