POLICE CONSTABLE
ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಯ ಸಂಪೂರ್ಣ ವಿಧಾನದ ಬಗ್ಗೆ ನಿಮಗೆಷ್ಟು ಗೊತ್ತು? ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಆಗಾಗ ಅಗತ್ಯ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್, ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್, ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳನ್ನು ನೇರ ನೇಮಕಾತಿ ವಿಧಾನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಇಂದಿನ ಲೇಖನದಲ್ಲಿ ಸಿವಿಲ್ ಪಿಸಿ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಯ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ. ಕರ್ನಾಟಕ ಪೊಲೀಸ್ ಇಲಾಖೆಯು ಈ ವಾರದಲ್ಲಿ 1500 ಸಿಬ್ಬಂದಿ ನೇಮಕಾತಿಗೆ ಅಧಿಸೂಚಿಸುವ ನಿರೀಕ್ಷೆ ಇದೆ. ಯಾವ ಹುದ್ದೆ, ಎಷ್ಟು ಹುದ್ದೆ ಎಂಬ ಬಗ್ಗೆ ಖಚಿತ ಮಾಹಿತಿ ಇಲ್ಲ. ಆದರೆ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹಾಗೂ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸುವ ನಿರೀಕ್ಷೆ ಇದೆ. ರಾಜ್ಯದ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಪಿಯುಸಿ ಪಾಸಾದವರು, ಸಬ್‌ಇನ್ಸ್‌ಪೆಕ್ಟರ್ ಹುದ್ದೆಗೆ ಪದವಿ ಪಾಸಾದವರು ಅರ್ಜಿ ಸಲ್ಲಿಸಲು ಅರ್ಹರು. ಸದ್ಯದಲ್ಲೇ ಈ ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ನಡೆಯುವ ಹಿನ್ನೆಲೆಯಲ್ಲಿ ಇಂದಿನ ಲೇಖನದಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪ್ರಕ್ರಿಯೆಯ ಕಂಪ್ಲೀಟ್ ಡೀಟೇಲ್ಸ್ ಅನ್ನು ಇಲ್ಲಿ ತಿಳಿಸಲಾಗಿದೆ. ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಮೊದಲು 100 ಅಂಕಗಳಿಗೆ ಲಿಖಿತ ಪರೀಕ್ಷೆ ಇರುತ್ತದೆ. ಮಲ್ಟಿಪಲ್...