Civil Constable
Civil Constable ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಆಗಾಗ ಅಗತ್ಯ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್, ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್, ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳನ್ನು ನೇರ ನೇಮಕಾತಿ ವಿಧಾನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಇಂದಿನ ಲೇಖನದಲ್ಲಿ ಸಿವಿಲ್ ಪಿಸಿ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಯ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ. ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಆಯ್ಕೆ ಪ್ರಕ್ರಿಯೆಗಳೇನು? ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಆಯ್ಕೆ ಪ್ರಕ್ರಿಯೆಗಳೇನು? - ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಮೊದಲು 100 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಇದು ಬಹುವಿಧ ಉತ್ತರ ಆಯ್ಕೆಗಳ ಪರೀಕ್ಷೆ ಆಗಿರುತ್ತದೆ. - ಲಿಖಿತ ಪರೀಕ್ಷೆಯಲ್ಲಿ 1:5 ರ ಅನುಪಾತದಡಿ ಒಟ್ಟು ಹುದ್ದೆಗೆ ಅರ್ಹಗೊಂಡ ಅಭ್ಯರ್ಥಿಗಳಿಗೆ ದೇಹದಾರ್ಢ್ಯತೆ ಪರೀಕ್ಷೆ ಮತ್ತು ಸಹಿಷ್ಣುತೆ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಲಿಖಿತ ಪರೀಕ್ಷೆ ಮಾದರಿ :- 100 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ವಸ್ತುನಿಷ್ಠ ಮಾದರಿಯ ಬಹುವಿಧ ಆಯ್ಕೆ ಉತ್ತರಗಳ ಪರೀಕ್ಷೆ ಇದಾಗಿರುತ್ತದೆ. ಪ್ರತಿ ಸರಿ ಉತ್ತರಕ್ಕೆ 1.00 ಅಂಕಗವನ್ನು ನೀಡಲಾಗುತ್ತದೆ. ತಪ್ಪು ಉತ್ತರಕ್ಕೆ 0.25 ಅಂಕ ಕಳೆಯಲಾಗುತ್ತದೆ. ಸೂಚನೆ : ವೃಂದ ಮತ್ತು ನೇಮಕಾತಿ (ತಿದ್ದುಪಡಿ) ನಿಯಮಗಳು, 2020 ರನ್ವಯ ಸದರಿ ಲಿಖಿತ ಪರೀ...